Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ದಿವಸದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ; ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:3
13 ತಿಳಿವುಗಳ ಹೋಲಿಕೆ  

ಎಫ್ರಾಯೀಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅವನು ಬಾರದೆ ಇದ್ದಾನೆ.


ನಾನು ಪ್ರಸವಕ್ಕೆ ತಂದಮೇಲೆ ಹೆರಿಗೆಯಾಗದಂತೆ ತಡೆಯುವೆನೋ?” ಎಂದು ಯೆಹೋವ ದೇವರು ಹೇಳುತ್ತಾನೆ. “ನಾನು ಪ್ರಸವಕ್ಕೆ ತಂದಮೇಲೆ, ಪ್ರಸವವಾಗದೆ ಇರಲು ಗರ್ಭ ಮುಚ್ಚಿಬಿಡುವೆನೇ?” ಎಂದು ನಿನ್ನ ದೇವರು ಕೇಳುತ್ತಾನೆ.


ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


“ನೀವು ಮೆರೀಬದಲ್ಲಿ ಮಾಡಿದಂತೆ, ಹೌದು, ಅಂದು ನೀವು ಮರುಭೂಮಿಯ ಮಸ್ಸಾ ಎಂಬ ಸ್ಥಳದಲ್ಲಿ ಮಾಡಿದಂತೆ, ನಿಮ್ಮ ಹೃದಯವನ್ನು ಕಠಿಣಪಡಿಸಬೇಡಿರಿ.


ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.


ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ. ಏಕೆಂದರೆ ಅವನು ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ಶಕ್ತನಲ್ಲ.


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’ ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು