8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ, ಅಸ್ಸೀರಿಯದ ಅರಸನು ಲಾಕೀಷನನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.
8 ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು.