Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ, ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಎಲೀಯನನ್ನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಎಲೀಯನನ್ನು ಸುಂಟರಗಾಳಿಯ ಮೂಲಕ ಪರಲೋಕಕ್ಕೆ ಕರೆದುಕೊಳ್ಳುವ ಕಾಲ ಹತ್ತಿರ ಬಂದಿತು. ಎಲೀಯನು ಎಲೀಷನೊಡನೆ ಗಿಲ್ಗಾಲಿನಿಂದ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:1
15 ತಿಳಿವುಗಳ ಹೋಲಿಕೆ  

ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.


ನಂಬಿಕೆಯಿಂದಲೇ ಹನೋಕನು ಮರಣ ಹೊಂದದೆ, ಒಯ್ಯಲಾದನು. “ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.” ಅವನು ಒಯ್ಯಲಾಗುವುದಕ್ಕಿಂತ ಮುಂಚೆ ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿಹೊಂದಿದನು.


ಆಗ ಯೆಹೋವ ದೇವರು, “ನೀನು ಹೊರಗೆ ಬಂದು ಬೆಟ್ಟದ ಮೇಲೆ ನನ್ನ ಮುಂದೆ ನಿಲ್ಲು. ಏಕೆಂದರೆ ನಾನು ನಿನ್ನ ಮುಂದೆ ಹಾದು ಹೋಗುತ್ತಿದ್ದೇನೆ,” ಎಂದನು. ಯೆಹೋವ ದೇವರ ಮುಂದೆ ಬೆಟ್ಟಗಳನ್ನು ಭೇದಿಸಿ, ಗುಡ್ಡಗಳನ್ನು ಒಡೆಯುವಂಥ ಮಹಾಬಲವಾದ ಗಾಳಿ, ಆ ಗಾಳಿಯಲ್ಲಿ ಯೆಹೋವ ದೇವರು ಇರಲಿಲ್ಲ. ಗಾಳಿಯ ತರುವಾಯ ಭೂಕಂಪವು, ಆ ಭೂಕಂಪದಲ್ಲಿ ಯೆಹೋವ ದೇವರು ಇರಲಿಲ್ಲ.


ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ.


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನಿನಿಂದ ಹೊರಟು, ಯೆರಿಕೋವಿನ ಪೂರ್ವದಿಕ್ಕಿನ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದುಕೊಂಡರು.


ಆಗ ಅವರಿಗೆ, “ಇಲ್ಲಿ ಮೇಲಕ್ಕೆ ಬನ್ನಿರಿ,” ಎಂದು ಮಹಾಧ್ವನಿಯು ಕೇಳಿಸಿತು. ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.


ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.


ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು


ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಹೀಗೆಂದು ಉತ್ತರಕೊಟ್ಟರು:


ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.


ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು