2 ಅರಸುಗಳು 2:12 - ಕನ್ನಡ ಸಮಕಾಲಿಕ ಅನುವಾದ12 ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎಲೀಷನು ಅದನ್ನು ನೋಡುತ್ತಾ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಗಳಾಗಿದ್ದವನೇ ಎಂದು ಕೂಗಿ ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಎಲೀಷನು ಅದನ್ನು ನೋಡಿ, “ನನ್ನ ತಂದೆಯೇ! ನನ್ನ ತಂದೆಯೇ! ಇಸ್ರೇಲಿಗೆ ರಥರಥಾಶ್ವಗಳೂ ಮತ್ತು ಅಶ್ವದಳವೂ ಆಗಿದ್ದವನೇ!” ಎಂದು ಕೂಗಿಕೊಂಡನು. ಎಲೀಷನು ಎಲೀಯನನ್ನು ಮತ್ತೆ ನೋಡಲಿಲ್ಲ. ಎಲೀಷನು ತನ್ನ ಬಟ್ಟೆಗಳನ್ನು ಹಿಡಿದುಕೊಂಡು, ತನ್ನ ದುಃಖವನ್ನು ತೋರ್ಪಡಿಸಲು ಅವುಗಳನ್ನು ಹರಿದು ತುಂಡುತುಂಡು ಮಾಡಿದನು. ಅಧ್ಯಾಯವನ್ನು ನೋಡಿ |