Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಪಟ್ಟಣದ ಮನುಷ್ಯರು ಎಲೀಷನಿಗೆ, “ಈ ಪಟ್ಟಣದ ಸ್ಥಳವು ಒಳ್ಳೆಯದಾಗಿದೆ. ನಮ್ಮ ಯಜಮಾನನೇ, ನೋಡು ನಿನಗೆ ಕಾಣುವುದು. ಆದರೆ ನೋಡು ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆರಿಕೋವಿನ ಜನರು ಎಲೀಷನಿಗೆ, “ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರಿಕೋವಿನ ಜನರು ಎಲೀಷ, “ನಮ್ಮ ಒಡೆಯರಾದ ನಿಮಗೆ ಗೊತ್ತಿರುವಂತೆ ಈ ಊರು ಕಟ್ಟಿಸಿರುವ ಸ್ಥಳ ಚೆನ್ನಾಗಿದೆ. ಆದರೆ ನೀರು ಕೆಟ್ಟದ್ದು. ಆದುದರಿಂದ ಗರ್ಭಪಾತ ಹೆಚ್ಚು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆರಿಕೋವಿನ ಜನರು ಎಲೀಷನಿಗೆ - ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೇದಾಗಿದೆ; ಆದರೆ ನೀರು ಕೆಟ್ಟದ್ದಾಗಿರುವದರಿಂದ ಬಂಜೆತನ ಹೆಚ್ಚು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಗರದ ಜನರು ಎಲೀಷನಿಗೆ, “ಸ್ವಾಮೀ, ಈ ನಗರವು ಒಳ್ಳೆಯ ಸ್ಥಳದಲ್ಲಿದೆಯೆಂಬುದನ್ನು ನೀನು ನೋಡುತ್ತಿರುವೆ. ಆದರೆ ನೀರು ತುಂಬಾ ಕೆಟ್ಟಿದೆ. ಆ ಕಾರಣದಿಂದಲೇ ಈ ಭೂಮಿಯಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:19
16 ತಿಳಿವುಗಳ ಹೋಲಿಕೆ  

ಗರ್ಭ ಸ್ರಾವವಾಗಲಿ, ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವುದಿಲ್ಲ. ನಾನು ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ಅನುಗ್ರಹಿಸುವೆನು.


ನಿಮಗೆ ಕೊಡುತ್ತೇನೆಂದು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಯೆಹೋವ ದೇವರು ಭೂಮಿಯ ಮೇಲೆ ನಿಮ್ಮನ್ನು ಸಂತಾನ, ಪಶು ಮತ್ತು ಕೃಷಿ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವರು.


ಆರೋನನು ಮೋಶೆಗೆ, “ಅಯ್ಯೋ ನನ್ನ ಒಡೆಯನೇ, ನಾವು ಪಾಪಮಾಡಿದೆವು. ಬುದ್ಧಿ ಇಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.


ಅವರು ಮಾರಾ ಎಂಬಲ್ಲಿಗೆ ಬಂದ ಮೇಲೆ ಅಲ್ಲಿಯ ನೀರನ್ನು ಕುಡಿಯಲಾರದೆ ಇದ್ದರು; ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು “ಮಾರಾ” ಎಂದು ಕರೆಯಲಾಯಿತು.


ಅನಂತರ ಯೆಹೋವ ದೇವರು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟಿನ ನೀರಿನ ಮೇಲೆಯೂ ಅದರ ನದಿಗಳ ಮೇಲೆಯೂ ಕೊಳಗಳ ಮೇಲೆಯೂ ಅದರ ಕಾಲುವೆ ಮೇಲೆಯೂ ಅದರ ಕೆರೆಗಳ ಮೇಲೆಯೂ ಕೈಚಾಚು,’ ಎಂದು ಹೇಳು. ಆಗ ಅವು ರಕ್ತವಾಗುವುವು. ಈಜಿಪ್ಟ್ ದೇಶದಲ್ಲಿ ನೀರಿರುವ ಮರದ ತೊಟ್ಟಿಗಳಲ್ಲಾಗಲೀ, ಕಲ್ಲಿನ ಪಾತ್ರೆಗಳಲ್ಲಾಗಲೀ ರಕ್ತವಿರುವುದು,” ಎಂದು ಹೇಳಿದರು.


ಅವನ ದಿವಸಗಳಲ್ಲಿ ಬೇತೇಲಿನ ಹೀಯೇಲನು ಯೆರಿಕೋವನ್ನು ಕಟ್ಟಿಸಿದನು. ಯೆಹೋವ ದೇವರು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ, ತನ್ನ ಚೊಚ್ಚಲಮಗನಾದ ಅಬೀರಾಮನನ್ನೂ, ಅದರ ಬಾಗಿಲುಗಳನ್ನು ಇಟ್ಟಾಗ ತನ್ನ ಕಿರಿ ಮಗನಾದ ಸೆಗೂಬನನ್ನೂ ಕಳೆದುಕೊಂಡನು.


ಯೆಹೋವ ದೇವರೇ, ಅವರಿಗೆ ಕೊಡಿರಿ. ಅವರಿಗೆ ನೀವು ಏನು ಕೊಡುತ್ತೀರಿ? ಗರ್ಭ ಸ್ರಾವ, ಗರ್ಭವನ್ನು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡಿರಿ.


ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.


ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.”


ಆದರೂ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರಿಗೆ ಅರ್ಪಿತವಾದವುಗಳು. ರಾಹಾಬಳೆಂಬ ವೇಶ್ಯೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಆಕೆಯು ಬಚ್ಚಿಟ್ಟಿದ್ದಳು.


ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?


ಅವನು ಯೆರಿಕೋವಿನಲ್ಲಿ ನಿಂತಿರುವಾಗ, ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಅವರಿಗೆ, “ಹೋಗಬೇಡಿರೆಂದು ನಾನು ನಿಮಗೆ ಹೇಳಲಿಲ್ಲವೋ?” ಎಂದನು.


ಅದಕ್ಕವನು, “ನನ್ನ ಬಳಿಗೆ ಹೊಸ ಗಡಿಗೆಯನ್ನು ತೆಗೆದುಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ,” ಎಂದನು. ಅವರು ಅವನ ಬಳಿಗೆ ತೆಗೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು