2 ಅರಸುಗಳು 2:5 - ಕನ್ನಡ ಸಮಕಾಲಿಕ ಅನುವಾದ5 ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸುಮ್ಮನಿರಿ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಲ್ಲಿನ ಪ್ರವಾದಿಮಂಡಲಿಯವರು ಅವನನ್ನು ಎದುರುಗೊಂಡು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ಕರೆದುಕೊಳ್ಳುವನೆಂದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಗೊತ್ತುಂಟು, ಸುಮ್ಮನಿರ್ರಿ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು. ಅಧ್ಯಾಯವನ್ನು ನೋಡಿ |