2 ಅರಸುಗಳು 2:6 - ಕನ್ನಡ ಸಮಕಾಲಿಕ ಅನುವಾದ6 ಎಲೀಯನು ಅವನಿಗೆ, “ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೊರ್ದನಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರಿಬ್ಬರೂ ಮುಂದಕ್ಕೆ ನಡೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೆಯಿರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿ ಇದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಎಲೀಯನು ತಿರಿಗಿ ಅವನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆಗ ಅವನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಉತ್ತರಕೊಟ್ಟನು; ಆದದರಿಂದ ಇಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೋರ್ಡನ್ ನದಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಅವರಿಬ್ಬರೂ ಮುಂದೆ ಸಾಗಿದರು. ಅಧ್ಯಾಯವನ್ನು ನೋಡಿ |