Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:1 - ಕನ್ನಡ ಸಮಕಾಲಿಕ ಅನುವಾದ

1 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ಹಿಜ್ಕೀಯನಿಗೆ ಕಾಯಿಲೆಯಾಗಿ ಸತ್ತಂತಾದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಹಿಜ್ಕೀಯನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ. ‘ನಿನ್ನ ಮನೆಯನ್ನು ವ್ಯವಸ್ಥೆಗೊಳಿಸು; ಏಕೆಂದರೆ ನೀನು ಸಾಯುವೆ, ಬದುಕುವುದಿಲ್ಲ!’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:1
15 ತಿಳಿವುಗಳ ಹೋಲಿಕೆ  

ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ,


ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ ಎಂದು ಹೇಳು,” ಎಂದರು. ಆಗ ಎಲೀಯನು ಹೊರಟುಹೋಗಿ ಅದರಂತೆ ಹೇಳಿದನು.


ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು