2 ಅರಸುಗಳು 20:13 - ಕನ್ನಡ ಸಮಕಾಲಿಕ ಅನುವಾದ13 ಹಿಜ್ಕೀಯನು ಅವರ ಮಾತು ಕೇಳಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ ಅವರಿಗೆ ಬೆಳ್ಳಿ ಬಂಗಾರ ಸುಗಂಧದ್ರವ್ಯ ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹಿಜ್ಕೀಯನು ಬಾಬಿಲೋನಿನ ಜನರನ್ನು ಸ್ವಾಗತಿಸಿ, ಅವರಿಗೆ ತನ್ನ ಮನೆಯಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೋರಿಸಿದನು. ಅವನು ತನ್ನ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು, ಸುಗಂಧದ್ರವ್ಯಗಳನ್ನು, ಪರಿಮಳಭರಿತ ತೈಲವನ್ನು, ಆಯುಧಗಳನ್ನು ತೋರಿಸಿದನು. ಹಿಜ್ಕೀಯನ ಮನೆಯಲ್ಲಿ ಮತ್ತು ಅವನ ರಾಜ್ಯದಲ್ಲಿ ಅವರಿಗೆ ತೋರಿಸದೆ ಉಳಿದದ್ದು ಏನೂ ಇರಲಿಲ್ಲ. ಅಧ್ಯಾಯವನ್ನು ನೋಡಿ |