2 ಅರಸುಗಳು 20:14 - ಕನ್ನಡ ಸಮಕಾಲಿಕ ಅನುವಾದ14 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದವರು ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಂತರ ಪ್ರವಾದಿಯಾದ ಯೆಶಾಯನು ರಾಜನಾದ ಹಿಜ್ಕೀಯನ ಬಳಿಗೆ ಬಂದು, “ಈ ಜನರು ಹೇಳುವುದೇನು? ಇವರು ಎಲ್ಲಿಂದ ಬಂದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹಳ ದೂರದೇಶದಿಂದ, ಬಾಬಿಲೋನಿನಿಂದ ಬಂದಿದ್ದಾರೆ” ಎಂದನು. ಅಧ್ಯಾಯವನ್ನು ನೋಡಿ |