Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:15 - ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಡವೆ ವಸ್ತು ಒಂದೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಶಾಯನು, “ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ನನ್ನ ಮನೆಯಲ್ಲಿರುವುದನ್ನೆಲ್ಲಾ ನೋಡಿದರು. ಅವರಿಗೆ ತೋರಿಸದೆ ಉಳಿದಿರುವುದು ನನ್ನ ಭಂಡಾರದಲ್ಲಿ ಏನೂ ಇಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:15
9 ತಿಳಿವುಗಳ ಹೋಲಿಕೆ  

ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ನಾನು ಹೃದಯದಲ್ಲಿ ನನ್ನ ಅಪರಾಧ ಪ್ರಜ್ಞೆಯನ್ನು ಅಡಗಿಸಿ, ಮಾನವರಂತೆ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.


ಹಿಜ್ಕೀಯನು ಅವರ ಮಾತು ಕೇಳಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.


ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಹೇಳಿದನು.


ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವ ದೇವರ ವಾಕ್ಯವನ್ನು ಕೇಳು:


ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.


ಯೆಹೋವ ದೇವರು ನನಗೆ ಹೀಗೆಂದರು: “ ‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು