2 ಅರಸುಗಳು 20:19 - ಕನ್ನಡ ಸಮಕಾಲಿಕ ಅನುವಾದ19 ಆಗ ಹಿಜ್ಕೀಯನು, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ,” ಎಂದು ಯೆಶಾಯನಿಗೆ ಹೇಳಿದನು. ಅವನು, ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು, ಎಂದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ‘ನನ್ನ ಜೀವಮಾನದಲ್ಲಿ ಹೇಗೂ ಸೌಭಾಗ್ಯವಿದ್ದರೆ ಸಾಕು’ ಎಂದುಕೊಂಡ ಹಿಜ್ಕೀಯನು ಯೆಶಾಯನಿಗೆ, “ನೀವು ತಿಳಿಸಿದ ಸರ್ವೇಶ್ವರನ ಮಾತು ಹಿತಕರವಾಗಿದೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಜೀವಮಾನದಲ್ಲಿ ಹೇಗೂ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |