2 ಅರಸುಗಳು 21:13 - ಕನ್ನಡ ಸಮಕಾಲಿಕ ಅನುವಾದ13 ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ವಿರುದ್ಧ ಬಳಸಿದ ನೂಲನ್ನೂ, ಅಹಾಬನ ಮನೆಯ ವಿರುದ್ಧ ಬಳಸಿದ ಮಟ್ಟಗೋಲನ್ನೂ ಚಾಚಿ, ಒಬ್ಬನು ತಟ್ಟೆಯನ್ನು ಒರೆಸಿದಂತೆ ಅದನ್ನು ಒರೆಸಿ ತಲೆಕೆಳಗಾಗಿ ಹಾಕುವ ಹಾಗೆ ನಾನು ಯೆರೂಸಲೇಮನ್ನು ಅಳಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೂಲು, ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರಿಯವನ್ನೂ ಅಹಾಬನ ಮನೆಯನ್ನೂ ನೆಲಸಮ ಮಾಡಿಬಿಟ್ಟೆನಲ್ಲವೆ? ಜೆರುಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಉಜ್ಜಿ ತಲೆ ಕೆಳಗಾಗಿ ಇಡುವಂತೆ ನಾನು ಜೆರುಸಲೇಮನ್ನು ಉಜ್ಜಿ ತಲೆ ಕೆಳಗಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ ಅಹಾಬನ ಮನೆಯನ್ನೂ ನೆಲಸಮಮಾಡಿಬಿಟ್ಟೆನಲ್ಲಾ; ಯೆರೂಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಡಬ್ಬುಹಾಕುವ ಮೇರೆಗೆ ನಾನು ಯೆರೂಸಲೇಮನ್ನು ಒರಸಿ ಡಬ್ಬು ಹಾಕುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿ |