Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:1 - ಕನ್ನಡ ಸಮಕಾಲಿಕ ಅನುವಾದ

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತಿನ ಅದಾಯನ ಮಗಳಾದ ಯೆದೀದಾ ಎಂಬವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಅವನು ಆಳಿದ್ದು ಮೂವತ್ತೊಂದು ವರ್ಷ. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆ ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನು ಅರಸನಾದಾಗ ಎಂಟು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂವತ್ತೊಂದು ವರುಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಷೀಯನು ಆಳಲಾರಂಭಿಸಿದಾಗ ಅವನಿಗೆ ಎಂಟು ವರ್ಷ ವಯಸ್ಸಾಗಿತ್ತು. ಅವನು ಮೂವತ್ತೊಂದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಯದೀದಾ. ಇವಳು ಬೊಚ್ಕತ್ ಎಂಬ ಸ್ಥಳದ ಅದಾಯ ಎಂಬವನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:1
14 ತಿಳಿವುಗಳ ಹೋಲಿಕೆ  

ಲಾಕೀಷ್, ಬೊಚ್ಕತ್, ಎಗ್ಲೋನ್,


ಹಿಜ್ಕೀಯನು ಮನಸ್ಸೆಯ ತಂದೆ, ಮನಸ್ಸೆಯು ಆಮೋನನ ತಂದೆ, ಆಮೋನನು ಯೋಷೀಯನ ತಂದೆ,


ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ:


ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು.


“ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ, ಮಕ್ಕಳು ಅವರ ಮೇಲೆ ಆಳುವಂತೆ ಮಾಡುವೆನು.”


ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!


ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.


ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.


ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು.


ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.


ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಅವನ ಶವವನ್ನು, ಉಜ್ಜನ ತೋಟದಲ್ಲಿ ಅವನು ಮೊದಲೇ ತನಗೋಸ್ಕರ ಸಿದ್ದಪಡಿಸಿಟ್ಟಿದ್ದ ಸಮಾಧಿಯಲ್ಲಿ ಹೂಣಿಟ್ಟರು. ಅವನ ಮಗ ಯೋಷೀಯನು ಅವನಿಗೆ ಬದಲಾಗಿ ಅರಸನಾದನು.


“ಒಂದು ವೇಳೆ ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಆಲೋಚಿಸಿ, ಇಂಥಾ ಕಾರ್ಯಗಳನ್ನು ನಡೆಸದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು