Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:12 - ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕಾಯನ ಮಗನಾದ ಅಕ್ಬೋರನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡು, ಯಾಜಕ ಹಿಲ್ಕೀಯನು ಶಾಫಾನನ ಮಗ ಅಹೀಕಾಮ್, ಮೀಕಾಯನ ಮಗ ಅಕ್ಬೋರ್, ಲೇಖಕ ಶಾಫಾನ್ ಹಾಗು ತನ್ನ ಹಸ್ತಕನಾದ ಅಸಾಯ ಎಂಬುವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಟ್ಟೆಗಳನ್ನು ಹರಿದುಕೊಂಡು ಯಾಜಕನಾದ ಹಿಲ್ಕೀಯನು, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಹಸ್ತಕನಾದ ಅಸಾಯ ಎಂಬವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನಂತರ ರಾಜನು ಯಾಜಕನಾದ ಹಿಲ್ಕೀಯನಿಗೆ, ಶಾಫಾನನ ಮಗನಾದ ಅಹೀಕಾಮನಿಗೆ, ಮೀಕಾಯನ ಮಗನಾದ ಅಕ್ಬೋರನಿಗೆ, ಕಾರ್ಯದರ್ಶಿಯಾದ ಶಾಫಾನನಿಗೆ ಮತ್ತು ರಾಜಸೇವಕನಾದ ಅಸಾಯನಿಗೆ ಒಂದು ಆಜ್ಞೆಯನ್ನು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:12
9 ತಿಳಿವುಗಳ ಹೋಲಿಕೆ  

ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.


ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.


ಕಾರ್ಯದರ್ಶಿಯಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆ, “ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ, ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಿದ್ದಾರೆ,” ಎಂದನು.


ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.


ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು