2 ಅರಸುಗಳು 22:14 - ಕನ್ನಡ ಸಮಕಾಲಿಕ ಅನುವಾದ14 ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜ ವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆಯು ಯೆರೂಸಲೇವಿುನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು. ಅಧ್ಯಾಯವನ್ನು ನೋಡಿ |