Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:17 - ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿ ಆರಿ ಹೋಗುವದೇ ಇಲ್ಲ ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:17
33 ತಿಳಿವುಗಳ ಹೋಲಿಕೆ  

ತನ್ನ ತಂದೆಯು ನಡೆದ ಸಮಸ್ತ ಮಾರ್ಗದಲ್ಲಿ ನಡೆದು, ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದನು.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ಸಹ ನಿನ್ನ ಮಧ್ಯದೊಳಗಿಂದ ಕಡಿದುಬಿಡುವೆನು. ಇನ್ನು ನಿನ್ನ ಸ್ವಂತ ಕೈಗಳು ರೂಪಿಸಿದ್ದನ್ನು ನೀನು ಆರಾಧಿಸದಂತೆ ಮಾಡುವೆನು.


ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.


ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


‘ಆಗ ಅವರು ತಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮಸ್ಕರಿಸಿ ಸೇವಿಸಿದ್ದರಿಂದಲೇ,’ ಎಂದು ಅವರು ಉತ್ತರಕೊಡುವರು.”


ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”


ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.


ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.


“ಯೆಹೋವ ದೇವರು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು