Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:2 - ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:2
18 ತಿಳಿವುಗಳ ಹೋಲಿಕೆ  

“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.


ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.


ಹಿಜ್ಕೀಯನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.


ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ.


ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.


ಅವನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ,


ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು.


ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.


ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.


ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು.


ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.


ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ:


ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ. ತನ್ನ ತಂದೆ ಯೋವಾಷನು ಮಾಡಿದ ಹಾಗೆ ಸಮಸ್ತವನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು