2 ಅರಸುಗಳು 22:20 - ಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |