2 ಅರಸುಗಳು 22:8 - ಕನ್ನಡ ಸಮಕಾಲಿಕ ಅನುವಾದ8 ಆಗ ಮಹಾಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ನನಗೆ ಯೆಹೋವ ದೇವರ ಆಲಯದಲ್ಲಿ ಮೋಶೆಯ ನಿಯಮದ ಗ್ರಂಥವು ಸಿಕ್ಕಿರುತ್ತದೆ,” ಎಂದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು. ಅವನು ಅದನ್ನು ಓದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಹಾಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ - ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರಧಾನಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿದನು. ಹಿಲ್ಕೀಯನು ಅದನ್ನು ಶಾಫಾನನಿಗೆ ನೀಡಿದನು. ಶಾಫಾನನು ಅದನ್ನು ಓದಿದನು. ಅಧ್ಯಾಯವನ್ನು ನೋಡಿ |