Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:1 - ಕನ್ನಡ ಸಮಕಾಲಿಕ ಅನುವಾದ

1 ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯ ಪ್ರಾಂತ್ಯದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇವಿುನ ಮತ್ತು ಯೆಹೂದ ಪ್ರಾಂತದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದದ ಮತ್ತು ಜೆರುಸಲೇಮಿನ ನಾಯಕರೆಲ್ಲರೂ ಬಂದು ತನ್ನನ್ನು ಭೇಟಿಯಾಗಬೇಕೆಂದು ರಾಜನಾದ ಯೋಷೀಯನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:1
8 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.


ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು, ಪಟ್ಟಣದ ಪ್ರಧಾನರನ್ನು ಕೂಡಿಸಿ, ಯೆಹೋವ ದೇವರ ಆಲಯಕ್ಕೆ ಹೋದನು.


ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ, ನಿಮ್ಮ ಅಧಿಕಾರಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ಆಗ ಈ ಮಾತುಗಳನ್ನು ಅವರು ಕೇಳುವ ಹಾಗೆ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.


ದಾವೀದನು ಇಸ್ರಾಯೇಲಿನಲ್ಲಿ ಆರಿಸಿದ ಮೂವತ್ತು ಸಾವಿರ ಸೈನಿಕರನ್ನು ಕೂಡಿಸಿಕೊಂಡು,


ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.


ಅನಂತರ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ, ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿದನು. ಅವರು ದೇವರ ಮುಂದೆ ಬಂದು ನಿಂತರು.


ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು