2 ಅರಸುಗಳು 23:12 - ಕನ್ನಡ ಸಮಕಾಲಿಕ ಅನುವಾದ12 ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್‍ಹಳ್ಳದಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು. ಅಧ್ಯಾಯವನ್ನು ನೋಡಿ |
ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.