2 ಅರಸುಗಳು 23:13 - ಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಸ್ರಯೇಲರ ಅರಸ ಸೊಲೊಮೋನನು ಸಿದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಜೆರುಸಲೇಮಿನ ಎದುರಿನಲ್ಲೂ ಎಘ್ನಪರ್ವತದ ದಕ್ಷಿಣದಿಕ್ಕಿನಲ್ಲೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯವಿಗ್ರಹಗಳಿಗೋಸ್ಕರ ಯೆರೂಸಲೇವಿುನ ಎದುರಿನಲ್ಲಿಯೂ ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು. ಅಧ್ಯಾಯವನ್ನು ನೋಡಿ |