Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:14 - ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಲ್ಲುಗಂಬಗಳನ್ನು ಒಡೆದುಹಾಕಿ, ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು, ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕಲ್ಲುಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಲುಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಆ ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:14
17 ತಿಳಿವುಗಳ ಹೋಲಿಕೆ  

ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.


ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.


ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು, ದೇವರ ಮನುಷ್ಯನು ಹೇಳಿದ ಈ ಮಾತುಗಳನ್ನು ಯೆಹೋವ ದೇವರ ವಾಕ್ಯದ ಪ್ರಕಾರ, ಬಲಿಪೀಠದ ಮೇಲೆ ಅವುಗಳನ್ನು ಸುಟ್ಟು ಅದನ್ನು ಅಶುದ್ಧ ಮಾಡಿದನು.


ಅದರ ವಿಗ್ರಹಗಳೆಲ್ಲಾ ತುಂಡುಗಳಾಗುವಂತೆ ಮಾಡುವೆನು. ಅದರ ಆಲಯದ ಕಾಣಿಕೆಗಳೆಲ್ಲಾ ಬೆಂಕಿಯಿಂದ ಸುಟ್ಟುಹೋಗುವುದು. ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು. ಅದು ವೇಶ್ಯಾವೃತ್ತಿಯ ಕೂಲಿಯಿಂದ ಕೂಡಿಸಿಕೊಂಡವು. ವೇಶ್ಯಾವೃತ್ತಿಯ ಕೂಲಿಯನ್ನಾಗಿಯೇ ಅವುಗಳನ್ನು ಉಪಯೋಗಿಸಬೇಕಾಗುತ್ತದೆ.


ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.


ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.


“ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.


ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಇಸ್ರಾಯೇಲರ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಬಲಿಪೀಠಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿ ಬಿಡುವೆನು.


ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು