2 ಅರಸುಗಳು 23:15 - ಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದಲ್ಲದೆ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಬಲಿಪೀಠವನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು. ಅಧ್ಯಾಯವನ್ನು ನೋಡಿ |
ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.