Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರುಸಲೇಮಿನವರನ್ನೂ ಪ್ರವಾದಿಗಳನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಚಿಕ್ಕವರೂ ದೊಡ್ಡವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರು ಪ್ರವಾದಿಗಳು ಇವರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು; ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:2
18 ತಿಳಿವುಗಳ ಹೋಲಿಕೆ  

ಆಗ ಮಹಾಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ನನಗೆ ಯೆಹೋವ ದೇವರ ಆಲಯದಲ್ಲಿ ಮೋಶೆಯ ನಿಯಮದ ಗ್ರಂಥವು ಸಿಕ್ಕಿರುತ್ತದೆ,” ಎಂದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು. ಅವನು ಅದನ್ನು ಓದಿದನು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ಯೆಹೋವ ದೇವರಿಗೆ ಭಯ ಪಡುವವರಾದ ಹಿರಿಯರನ್ನೂ ಕಿರಿಯರನ್ನೂ ಬೇಧವಿಲ್ಲದೇ ಆಶೀರ್ವದಿಸುವರು.


ಅಲ್ಲಿ ಕಿರಿಯರು ಹಿರಿಯರು ಎಂಬ ಭೇದ ಇಲ್ಲಾ; ಗುಲಾಮರು ಯಜಮಾನರಿಂದ ಬಿಡುಗಡೆಯಾಗಿರುತ್ತಾರೆ.


ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.


ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು.


ಅವರು ತಮ್ಮ ಸ್ಥಳಗಳಲ್ಲಿ ನಿಂತು ಮೂರು ತಾಸುಗಳು ತಮ್ಮ ದೇವರಾಗಿರುವ ಯೆಹೋವ ದೇವರ ನಿಯಮದ ಗ್ರಂಥವನ್ನು ಓದಿದರು. ಮತ್ತೊಂದು ಮೂರು ತಾಸುಗಳು ತಮ್ಮ ಪಾಪಗಳನ್ನು ಅರಿಕೆಮಾಡಿ, ತಮ್ಮ ದೇವರಾಗಿರುವ ಯೆಹೋವ ದೇವರನ್ನು ಆರಾಧಿಸಿದರು.


ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಯೆಹೋವ ದೇವರ ನಿಯಮದ ಗ್ರಂಥ ಇತ್ತು. ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ, ಜನರಿಗೆ ಬೋಧಿಸಿದರು.


ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.


ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರನ್ನಾದರೂ, ಕಿರಿಯರನ್ನಾದರೂ ಕೊಂದುಹಾಕದೆ, ಅವರನ್ನು ಸೆರೆಯಾಗಿ ತೆಗೆದುಕೊಂಡು, ತಮ್ಮ ಮಾರ್ಗವಾಗಿ ಹೊರಟು ಹೋದರು.


ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.


“ದೇವರ ನಿಯಮದ ಈ ಗ್ರಂಥವನ್ನು ತೆಗೆದುಕೊಂಡು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿ ಇಡಿರಿ. ಅದು ನಿಮಗೆ ವಿರೋಧವಾದ ಸಾಕ್ಷಿಯಾಗಿ ಅಲ್ಲಿ ಇರಲಿ.


ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.


ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು