Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:34 - ಕನ್ನಡ ಸಮಕಾಲಿಕ ಅನುವಾದ

34 ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಫರೋಹ ನೆಕೋವನು, ಯೋಷೀಯನಿಗೆ ಬದಲಾಗಿ ಅವನ ಮಗ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು, ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದನು; ಯೆಹೋವಾಹಾಜನು ಅಲ್ಲೆ ಮೃತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇವಿುಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮೃತಿಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಫರೋಹ ನೆಕೋವನು ಯೋಷೀಯನ ಮಗನಾದ ಎಲ್ಯಾಕೀಮನನ್ನು ಹೊಸರಾಜನನ್ನಾಗಿ ಮಾಡಿ ಎಲ್ಯಾಕೀಮನ ಹೆಸರನ್ನು ಯೆಹೋಯಾಕೀಮನೆಂದು ಬದಲಾಯಿಸಿದನು. ಯೆಹೋವಾಹಾಜನನ್ನು ಫರೋಹ ನೆಕೋವನು ಈಜಿಪ್ಟಿಗೆ ಕರೆದೊಯ್ದುನು. ಯೆಹೋವಾಹಾಜನು ಈಜಿಪ್ಟಿನಲ್ಲಿ ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:34
11 ತಿಳಿವುಗಳ ಹೋಲಿಕೆ  

ಯೋಷೀಯನ ಮಕ್ಕಳು: ಚೊಚ್ಚಲಮಗನಾದ ಯೋಹಾನಾನ್, ಎರಡನೆಯವನಾದ ಯೆಹೋಯಾಕೀಮ್, ಮೂರನೆಯವನಾದ ಚಿದ್ಕೀಯ, ನಾಲ್ಕನೆಯವನಾದ ಶಲ್ಲೂಮ್.


ಬಾಬಿಲೋನಿನ ಅರಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ, ಅವನಿಗೆ ಚಿದ್ಕೀಯನೆಂದು ಬೇರೆ ಹೆಸರನ್ನಿಟ್ಟನು.


ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು.


ಅಲ್ಲಿಂದ ಬೇತ್ ಅರಾಬಾದ ಎದುರಾಗಿ ಉತ್ತರ ಭಾಗಕ್ಕೆ ಹೊರಟು, ಅರಾಬಾ ತಗ್ಗಿಗೆ ಇಳಿದು ಬರುತ್ತದೆ.


ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.


ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು.


ಯೋಷೀಯನ ಮಗನಾದ ಯೆಹೂದದ ಅರಸ ಯೆಹೋಯಾಕೀಮನ ಕಾಲದಲ್ಲಿ ಯೆರೆಮೀಯನಾದ ನನಗೆ ಯೆಹೋವ ದೇವರಿಂದ ಬಂದ ವಾಕ್ಯ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು