Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:4 - ಕನ್ನಡ ಸಮಕಾಲಿಕ ಅನುವಾದ

4 ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:4
35 ತಿಳಿವುಗಳ ಹೋಲಿಕೆ  

“ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.


ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು.


ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.


ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು


“ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ಪಾಪ ಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.”


“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.


ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.


“ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.


ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.


“ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ಅವನು ಯೆಹೋವ ದೇವರ ಆಲಯದ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.


ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.


ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.


ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.


ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.


ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ಒಂದನ್ನು ಬೇತೇಲಿನಲ್ಲಿಯೂ, ಒಂದನ್ನು ದಾನಿನಲ್ಲಿಯೂ ಸ್ಥಾಪಿಸಿದನು.


ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.


ಅವರು ಯೆಹೋವ ದೇವರನ್ನು ಬಿಟ್ಟು, ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.


ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.


ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.


ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು.


ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.


ಬಾಳನ ದೇವಸ್ಥಾನದಿಂದ ವಿಗ್ರಹಗಳನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.


ಪೆಟ್ಟಿಗೆಯಲ್ಲಿ ಬಹಳ ಹಣ ಉಂಟೆಂದು ಅವರು ಕಂಡಾಗಲೆಲ್ಲಾ ಅರಸನ ಲೇಖಕನೂ, ಮಹಾಯಾಜಕನೂ ಬಂದು, ಯೆಹೋವ ದೇವರ ಆಲಯದಲ್ಲಿ ತಂದಿದ್ದ ಹಣವನ್ನು ಎಣಿಸಿ, ಚೀಲಗಳಲ್ಲಿ ಹಾಕಿದರು.


ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.


“ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು