2 ಅರಸುಗಳು 23:5 - ಕನ್ನಡ ಸಮಕಾಲಿಕ ಅನುವಾದ5 ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ, ಯೆರೂಸಲೇಮಿನ ಸುತ್ತಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸರು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ, ಸೂರ್ಯನಿಗೂ, ಚಂದ್ರನಿಗೂ, ಗ್ರಹಗಳಿಗೂ, ಆಕಾಶದ ಸಮಸ್ತ ಸೈನ್ಯಕ್ಕೂ, ಧೂಪಸುಡುವವರನ್ನೂ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದಲ್ಲದೆ, ಜುದೇಯ ಪ್ರಾಂತ್ಯದ ಪಟ್ಟಣಗಳಲ್ಲೂ ಜೆರುಸಲೇಮಿನ ಸುತ್ತಣ ಪ್ರದೇಶದಲ್ಲೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ ಬಾಳ್ ದೇವತೆಗೂ ಸೂರ್ಯ ಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಾರತಿಯೆತ್ತುವುದಕ್ಕಾಗಿ ಜುದೇಯದ ರಾಜರಿಂದ ನೇಮಿತರಾಗಿದ್ದ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಯೆಹೂದ ಪ್ರಾಂತದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಸುತ್ತಣ ಪ್ರದೇಶದಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ ಬಾಳನಿಗೂ ಸೂರ್ಯಚಂದ್ರನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಸುಡುವದಕ್ಕಾಗಿ ಯೆಹೂದರಾಜರಿಂದ ನೇವಿುಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೂದದ ರಾಜರುಗಳು ಯಾಜಕರಾಗಿ ಸೇವೆಮಾಡಲು ಕೆಲವು ಸಾಮಾನ್ಯ ಜನರನ್ನು ಆರಿಸಿಕೊಂಡರು. ಈ ಜನರು ಆರೋನನ ಕುಲದಿಂದ ಬಂದವರಲ್ಲ! ಈ ಸುಳ್ಳುಯಾಜಕರು ಯೆಹೂದದ ನಗರಗಳಲ್ಲಿನ ಮತ್ತು ಜೆರುಸಲೇಮಿನ ಊರುಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು. ಅವರು ಬಾಳನನ್ನು, ಸೂರ್ಯನನ್ನು, ಚಂದ್ರನನ್ನು, ಆಕಾಶ ಸೈನ್ಯವಾದ ನಕ್ಷತ್ರಗಳನ್ನು ಗೌರವಿಸಲು ಧೂಪವನ್ನು ಸುಡುತ್ತಿದ್ದರು. ಆದರೆ ಯೋಷೀಯನು ಆ ಸುಳ್ಳು ಯಾಜಕರನ್ನು ನಿಲ್ಲಿಸಿದನು. ಅಧ್ಯಾಯವನ್ನು ನೋಡಿ |