Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:11 - ಕನ್ನಡ ಸಮಕಾಲಿಕ ಅನುವಾದ

11 ಅಷ್ಟರಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತಾನೇ ಆ ಪಟ್ಟಣಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಆ ನಗರಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:11
6 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮಿಗೆ ವಿರೋಧವಾಗಿ ಬಂದು ಆ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.


ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.


“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.


ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು, ಅದಕ್ಕೆ ವಿರೋಧವಾಗಿ ನಿಂತು, ಅದರ ಮೇಲೆ ಬಲೆಯನ್ನೊಡ್ಡಿದರು, ಆಗ ಅದು ಅವರ ಗುಂಡಿಯಲ್ಲಿ ಸಿಕ್ಕಿಬಿದ್ದಿತು.


ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ, ದಿಬ್ಬ ಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು