Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಮುಂತಿಳಿಸಿದ ಪ್ರಕಾರವೇ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದಲ್ಲಿ ಸಮಸ್ತ ಬೊಕ್ಕಸಗಳನ್ನೂ, ಅರಮನೆಯ ಬೊಕ್ಕಸಗಳನ್ನೂ, ಇಸ್ರಾಯೇಲಿನ ಅರಸನಾದ ಸೊಲೊಮೋನನು ಅರಸನ ಆಲಯದಲ್ಲಿ ಮಾಡಿದ ಬಂಗಾರದ ಸಮಸ್ತ ಪಾತ್ರೆಗಳನ್ನೂ ಸೂರೆಯಾಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಲ್ಲಿದ್ದ ಭಂಡಾರವನ್ನೆಲ್ಲಾ ಮತ್ತು ರಾಜನ ಅರಮನೆಯಲ್ಲಿದ್ದ ಭಂಡಾರವನ್ನೆಲ್ಲಾ ತೆಗೆದುಕೊಂಡು ಹೋದನು. ಇಸ್ರೇಲರ ರಾಜನಾದ ಸೊಲೊಮೋನನು ದೇವಾಲಯದಲ್ಲಿಟ್ಟಿದ್ದ ಬಂಗಾರವನ್ನೆಲ್ಲಾ ನೆಬೂಕದ್ನೆಚ್ಚರನು ತೆಗೆದುಕೊಂಡನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:13
15 ತಿಳಿವುಗಳ ಹೋಲಿಕೆ  

ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವ ದೇವರು ಹೇಳಿದರು.


ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ.


ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು.


“ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.


ಇದಲ್ಲದೆ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದ ಪಾತ್ರೆಗಳಲ್ಲಿ ಕೆಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಬಾಬಿಲೋನಿನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.


ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.


ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. ಅವರು ಅದನ್ನು ಅಪವಿತ್ರಪಡಿಸುವರು.


ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು