Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:2 - ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಪ್ರಕಾರ ಯೆಹೂದರಾಜ್ಯವನ್ನು ಹಾಳುಮಾಡುವದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:2
26 ತಿಳಿವುಗಳ ಹೋಲಿಕೆ  

ಆದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ, ‘ನಾವು ಬನ್ನಿ, ಕಸ್ದೀಯರ ದಂಡಿಗೂ, ಅರಾಮಿನ ದಂಡಿಗೂ ತಪ್ಪಿಸಿಕೊಂಡು, ಯೆರೂಸಲೇಮಿಗೆ ಹೋಗೋಣ,’ ಎಂದೆವು. ಹೀಗೆ ಯೆರೂಸಲೇಮಿನಲ್ಲಿಯೇ ಉಳಿದುಕೊಂಡಿದ್ದೇವೆ,” ಎಂದರು.


ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.


ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು, ಅದಕ್ಕೆ ವಿರೋಧವಾಗಿ ನಿಂತು, ಅದರ ಮೇಲೆ ಬಲೆಯನ್ನೊಡ್ಡಿದರು, ಆಗ ಅದು ಅವರ ಗುಂಡಿಯಲ್ಲಿ ಸಿಕ್ಕಿಬಿದ್ದಿತು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ.


ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.


ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.


ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”


ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.


ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


ನೆಬೂಕದ್ನೆಚ್ಚರನು ಸೆರೆಯಾಗಿ ಒಯ್ದ ಜನರ ಪಟ್ಟಿ ಹೀಗಿದೆ: ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು;


ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ.


ಬಾಬಿಲೋನಿನವರು ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಎಲ್ಲಾ ಅಸ್ಸೀರಿಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿ ಹೊಂದಿದವರೂ ಎಲ್ಲರೂ ಕುದುರೆಗಳ ಮೇಲೆ ಬೀಳುವಂತೆ ಮಾಡುವೆನು.


ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು