2 ಅರಸುಗಳು 24:20 - ಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ಅವನು ಚಿದ್ಕೀಯನ ಆಳಿಕೆಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು. ಅಧ್ಯಾಯವನ್ನು ನೋಡಿ |