Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:4 - ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವುಗಳಿಗಾಗಿ ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದದರಿಂದ ಆತನ ಅಪ್ಪಣೆಯ ಪ್ರಕಾರ ಈ ಶಿಕ್ಷೆಯು ಅವರಿಗೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:4
20 ತಿಳಿವುಗಳ ಹೋಲಿಕೆ  

ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?


ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ, ನೀವು ಮನ್ನಿಸಲಿಲ್ಲ.


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.


ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು.


“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


“ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಕೆಟ್ಟವುಗಳಿಗಿಂತಲೂ ಅಸಹ್ಯವಾದವುಗಳನ್ನು ಮಾಡಿದ್ದರಿಂದಲೂ, ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಕ್ಕೆ ಪ್ರೇರೇಪಿಸಿದ್ದರಿಂದಲೂ,


ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.


“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”


ಈ ಪಟ್ಟಣವು ಕಟ್ಟಿದ ದಿನದಿಂದ ಈ ದಿನದವರೆಗೂ ನನ್ನ ಕೋಪಕ್ಕೂ, ನನ್ನ ಉಗ್ರಕ್ಕೂ ಗುರಿಯಾಗಿತ್ತು. ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.


“ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು.


ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.


ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,


ಆಮೇಲೆ ನೀನು ಹೇಳಬೇಕಾದದ್ದೇನೆಂದರೆ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪಟ್ಟಣವು ಅದರ ಮಧ್ಯದಲ್ಲಿ ಅದರ ದಂಡನೆಯ ಕಾಲ ಬರುವಂತೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧಮಾಡುವಂತೆ ತನ್ನಲ್ಲಿ ವಿಗ್ರಹ ಮಾಡಿಕೊಂಡಿದೆ.


ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು