Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಈಜಿಪ್ಟಿನ ಅರಸನು ತನ್ನ ದೇಶದಿಂದ ತಿರುಗಿ ಬರಲಿಲ್ಲ. ಏಕೆಂದರೆ ಈಜಿಪ್ಟ್ ನದಿ ಮೊದಲುಗೊಂಡು ಯೂಫ್ರೇಟೀಸ್ ನದಿಯವರೆಗೂ ಈಜಿಪ್ಟಿನ ಅರಸನಿಗೆ ಇದ್ದದ್ದನ್ನೆಲ್ಲಾ ಬಾಬಿಲೋನಿನ ಅರಸನು ಸ್ವಾಧೀನಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಾಬಿಲೋನಿನ ಅರಸನು ಈಜಿಪ್ಟಿನ ಪ್ರವಾಹಕ್ಕೂ ಯೂಫ್ರಟಿಸ್ ನದಿಗೂ ಮಧ್ಯದಲ್ಲಿದ್ದ ಈಜಿಪ್ಟ್ ರಾಜನ ಎಲ್ಲಾ ದೇಶವನ್ನು ಸ್ವಾಧೀನ ಮಾಡಿಕೊಂಡನು. ಅಂದಿನಿಂದ ಈಜಿಪ್ಟಿನ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಾಬೆಲಿನ ಅರಸನು ಐಗುಪ್ತದ ಹಳ್ಳಕ್ಕೂ ಯೂಫ್ರೇಟೀಸ್ ನದಿಗೂ ಮಧ್ಯದಲಿದ್ದ ಐಗುಪ್ತ ರಾಜನ ಎಲ್ಲಾ ದೇಶವನ್ನು ಸ್ವಾಧೀನಮಾಡಿಕೊಂಡನು. ಅಂದಿನಿಂದ ಐಗುಪ್ತದ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಜಿಪ್ಟಿನ ರಾಜನು ಈಜಿಪ್ಟನ್ನು ಬಿಟ್ಟು ಹೊರಗೆ ಹೋಗಲಿಲ್ಲ. ಏಕೆಂದರೆ ಬಾಬಿಲೋನ್ ರಾಜನು, ಈಜಿಪ್ಟಿನ ಹಳ್ಳದಿಂದ ಯೂಫ್ರೇಟೀಸ್ ನದಿಯವರೆಗಿನ ದೇಶವನ್ನೆಲ್ಲಾ ಆಕ್ರಮಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:7
10 ತಿಳಿವುಗಳ ಹೋಲಿಕೆ  

ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಅಚ್ಮೋನಿನಿಂದ ಈಜಿಪ್ಟಿನ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.


ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು.


ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ಅಲ್ಲಿಂದ ಈಜಿಪ್ಟನ ಅಚ್ಮೋನ ನದಿಗೆ ಬಂದು ಮೆಡಿಟೆರಿಯನ್ ಸಮುದ್ರದವರೆಗೆ ಹೋಗಿ ಸೇರುವುದು. ಇದೇ ಯೆಹೂದದ ದಕ್ಷಿಣ ಮೇರೆ.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.


“ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು.


“ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು