Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:1 - ಕನ್ನಡ ಸಮಕಾಲಿಕ ಅನುವಾದ

1 ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು‍ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:1
33 ತಿಳಿವುಗಳ ಹೋಲಿಕೆ  

ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ, ದಿಬ್ಬ ಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.


ಯೆಹೋವ ದೇವರು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ, ಯೆರೂಸಲೇಮಿನವರನ್ನು ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.


“ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ಜಜ್ಜಿದ್ದಾನೆ. ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. ನಮ್ಮನ್ನು ಉಗುಳಿಬಿಟ್ಟಿದ್ದಾನೆ.


‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು. ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು.


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


“ ‘ “ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.


ಆ ಕಾಲದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮಿಗೆ ವಿರೋಧವಾಗಿ ಬಂದು ಆ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.


ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.


ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.


ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿದ್ದಾರೆ. ಏಕೆಂದರೆ ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಕುರುಬರು ತಮ್ಮ ಮಂದೆಗಳ ಸಂಗಡ ಅವಳ ವಿರುದ್ಧ ಬರುವರು. ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು. ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.”


“ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು.


ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷವಾಗಿದ್ದ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವು.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


“ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು.


ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ನಿಮ್ಮ ದೇಶದಲ್ಲೆಲ್ಲಾ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ಮುತ್ತಿಗೆ ಹಾಕುವರು. ನೀವು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿಮ್ಮ ಗೋಡೆಗಳನ್ನು ಕೆಡವಿಬಿಡುವರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.


ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು