Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:14 - ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದು ಮಾತ್ರವಲ್ಲ, ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವುಗಳ ತಾಮ್ರವನ್ನೂ ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ ಸಲಿಕೆ ಕತ್ತರಿ ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಾಬಿಲೋನಿನವರು ದೇವಾಲಯದಲ್ಲಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ವಸ್ತುಗಳನ್ನು ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:14
11 ತಿಳಿವುಗಳ ಹೋಲಿಕೆ  

ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು.


ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.


ಅನಂತರ ಅವರು ಬಲಿಪೀಠದ ಉಪಕರಣಗಳನ್ನೆಲ್ಲಾ ಅಂದರೆ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಇವುಗಳೆನ್ನೆಲ್ಲಾ ಕಂಚಿನಿಂದ ಮಾಡಿದರು.


ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.


ಪಾತ್ರೆಗಳು, ಸಲಿಕೆಗಳು, ಮುಳ್ಳುಗಳು. ಅವುಗಳ ಎಲ್ಲಾ ವಸ್ತುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯು ಹೇಳಿದಂತೆ ಹೂರಾಮ ಅಬೀ ಹೊಳೆಯುವ ಕಂಚಿನಿಂದ ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿದನು.


ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.


ಇದಲ್ಲದೆ ಅದರ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.


ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು:


ಪಾತ್ರೆಗಳು, ಸಲಿಕೆಗಳು, ಬೋಗುಣಿಗಳು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನಿಗೆ ಹೂರಾಮನು ಮಾಡಿದ ಈ ಸಲಕರಣೆಗಳೆಲ್ಲಾ ಹೊಳೆಯುವ ಕಂಚಿನವುಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು