2 ಅರಸುಗಳು 25:18 - ಕನ್ನಡ ಸಮಕಾಲಿಕ ಅನುವಾದ18 ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಂತರ, ನೆಬೂಜರದಾನನು, ಪ್ರಧಾನಯಾಜಕನಾದ ಸೆರಾಯನನ್ನು, ಎರಡನೆಯ ಯಾಜಕನಾದ ಚೆಫನ್ಯನನ್ನು ಮತ್ತು ಮೂವರು ದ್ವಾರಪಾಲಕರನ್ನು ಹಿಡಿದುಕೊಂಡು ಹೋದನು. ಅಧ್ಯಾಯವನ್ನು ನೋಡಿ |
ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.
ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’