2 ಅರಸುಗಳು 25:19 - ಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಐದು ಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ಜನರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸೈನ್ಯ ಸಂಬಂಧವಾದ ಎಲ್ಲ ವ್ಯವಸ್ಥೆಯನ್ನು, ನಗರದಲ್ಲಿ ಉಳಿದಿದ್ದ ಹಾಗು ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳನ್ನು, ಯುದ್ಧಕ್ಕೆ ಹೋಗತಕ್ಕವರನ್ನು ಪಟ್ಟಿಮಾಡುವ ಸೇನಾಪತಿಯ ಲೇಖಕನನ್ನು ಹಾಗು ನಗರದಲ್ಲಿದ್ದ ಅರವತ್ತು ಮಂದಿ ರೈತರನ್ನು ಹಿಡಿದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮೂರು ಮಂದಿ ದ್ವಾರಪಾಲಕರು, ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ರೈತರು ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೆಬೂಜರದಾನನು ಸೇನೆಯ ಸೇನಾಧಿಕಾರಿಯೊಬ್ಬನನ್ನು ಹಿಡಿದುಕೊಂಡು ಹೋದನು. ನೆಬೂಜರದಾನನು ನಗರದಲ್ಲಿ ಸಿಕ್ಕಿದ ರಾಜನ ಐದು ಮಂದಿ ಸಲಹೆಗಾರರನ್ನು ಹಿಡಿದೊಯ್ದನು. ಅವನು ಸೇನೆಯ ಅಧಿಕಾರಿಯ ಕಾರ್ಯದರ್ಶಿಯನ್ನು ಹಿಡಿದೊಯ್ದನು. ಸೇನಾಧಿಕಾರಿಯ ಕಾರ್ಯದರ್ಶಿಯು ಸಾಮಾನ್ಯ ಜನರನ್ನು ಒಟ್ಟುಗೂಡಿಸಿ, ಅವರನ್ನು ಸೈನಿಕರನ್ನಾಗಿ ಆರಿಸುತ್ತಿದ್ದನು. ನೆಬೂಜರದಾನನು ನಗರದಲ್ಲಿ ಸಿಕ್ಕಿದ ಇತರ ಅರವತ್ತು ಮಂದಿಯನ್ನು ಹಿಡಿದೊಯ್ದನು. ಈ ಜನರು ಸಾಮಾನ್ಯ ಜನರಾಗಿದ್ದರು. ಅಧ್ಯಾಯವನ್ನು ನೋಡಿ |