Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಾಬಿಲೋನಿಯದ ಸೈನಿಕರು ಅವನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲರು ಅವನನ್ನು ಬಿಟ್ಟು ಚದರಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಸ್ದೀಯರ ಸೈನ್ಯದವರು ಅವನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಾಬಿಲೋನ್ ಸೇನೆಯು ರಾಜನಾದ ಚಿದ್ಕೀಯನನ್ನು ಅಟ್ಟಿಸಿಕೊಂಡು ಹೋಗಿ, ಅವನನ್ನು ಜೆರಿಕೊವಿನ ಸಮೀಪದಲ್ಲಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:5
14 ತಿಳಿವುಗಳ ಹೋಲಿಕೆ  

ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.


ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


“ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.


ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ಚೀಯೋನ್ ಪುತ್ರಿಯ ಎಲ್ಲಾ ವೈಭವವು ಅವಳನ್ನು ಬಿಟ್ಟುಹೋಯಿತು. ಅವಳ ಪ್ರಧಾನರು ಹುಲ್ಲುಗಾವಲು ಕಾಣದ ಜಿಂಕೆಗಳ ಹಾಗಾದರು, ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಓಡಿಹೋದರು.


ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ, ಅವನ ಎಲ್ಲಾ ಸೈನ್ಯಗಳನ್ನೂ, ಎಲ್ಲಾ ದಿಕ್ಕುಗಳಿಗೆ ಚದರಿಸಿ, ಅವರ ಹಿಂದೆ ಖಡ್ಗವನ್ನು ಬೀಸುವೆನು.


ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು.


“ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು