Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋಷಾಫಾಟನು, “ಅವನ ಬಳಿಯಲ್ಲಿ ಯೆಹೋವ ದೇವರ ವಾಕ್ಯ ಇದೆ,” ಎಂದನು. ಇಸ್ರಾಯೇಲಿನ ಅರಸನೂ, ಯೆಹೋಷಾಫಾಟನೂ, ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೆಹೋಷಾಫಾಟನು, “ಅವನು ಹೇಗೂ ಸರ್ವೇಶ್ವರನ ಉತ್ತರವನ್ನು ತಿಳಿಸುವನು,” ಎಂದದ್ದರಿಂದ ಇಸ್ರಯೇಲ್ ಹಾಗು ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋಷಾಫಾಟನು - ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು ಅಂದದರಿಂದ ಇಸ್ರಾಯೇಲ್ ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋಷಾಫಾಟನು, “ಯೆಹೋವನ ನುಡಿಗಳು ಎಲೀಷನಲ್ಲಿವೆ!” ಎಂದು ಹೇಳಿದನು. ಇಸ್ರೇಲಿನ ರಾಜನಾದ ಯೋರಾಮನು, ಯೆಹೋಷಾಫಾಟನು ಮತ್ತು ಎದೋಮಿನ ರಾಜನು ಎಲೀಷನನ್ನು ನೋಡಲು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:12
12 ತಿಳಿವುಗಳ ಹೋಲಿಕೆ  

ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಅವನು ನೀರಿನ ಬುಗ್ಗೆಯ ಬಳಿಗೆ ಹೊರಟುಹೋಗಿ, ನೀರಿನಲ್ಲಿ ಉಪ್ಪು ಹಾಕಿ, “ ‘ಆ ನೀರನ್ನು ಶುದ್ಧಮಾಡಿದೆನು. ಇನ್ನು ಮೇಲೆ ಅದರಿಂದ ಮರಣವೂ, ಬಂಜೆತನವೂ ಆಗದಿರಲಿ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು.


ಎಲೀಷನು ಇಸ್ರಾಯೇಲಿನ ಅರಸನಿಗೆ, “ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆಯ ಪ್ರವಾದಿಗಳ ಬಳಿಗೂ, ನಿನ್ನ ತಾಯಿಯ ಪ್ರವಾದಿಗಳ ಬಳಿಗೂ ಹೋಗು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ಇಲ್ಲ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕೆ ಒಟ್ಟಾಗಿ ಕರೆದಿದ್ದಾರಲ್ಲಾ,” ಎಂದನು.


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು