Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:17 - ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ಯೆಹೋವ ದೇವರು, ‘ನೀವು ಗಾಳಿಯನ್ನೂ, ಮಳೆಯನ್ನೂ ಕಾಣುವುದಿಲ್ಲ. ಆದರೆ ನೀವು ನಿಮ್ಮ ದನಗಳೂ, ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಗಾಳಿಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವುದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಪ್ರಾಣಿಗಳೂ ಕುಡಿಯಬಹುದು ಎಂಬುದಾಗಿ ಸರ್ವೇಶ್ವರ ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಗಾಳಿ ಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಗಳೂ ಕುಡಿಯಬಹುದು ಎಂಬದಾಗಿ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಗಾಳಿಯನ್ನು ನೋಡುವುದಿಲ್ಲ, ಮಳೆಯನ್ನೂ ನೋಡುವುದಿಲ್ಲ; ಆದರೆ ಆ ಕಣಿವೆಯು ನೀರಿನಿಂದ ತುಂಬಿಕೊಳ್ಳುತ್ತದೆ. ಆಗ ನಿಮಗೆ, ನಿಮ್ಮ ಹಸುಗಳಿಗೆ ಮತ್ತು ಇತರ ಪಶುಗಳಿಗೆ ಕುಡಿಯಲು ನೀರು ಸಿಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:17
9 ತಿಳಿವುಗಳ ಹೋಲಿಕೆ  

ದೇವರು ಮರುಭೂಮಿಯನ್ನು ನೀರಿನ ಕೆರೆಯಾಗಿಯೂ, ಒಣ ಭೂಮಿಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸಿದರು.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ಬಾಕಾ ತಗ್ಗನ್ನು ದಾಟುವಾಗ ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ. ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.


ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಆಗ ಅವನು, “ಈ ತಗ್ಗನ್ನು ಹಳ್ಳಕೊಳ್ಳಗಳಾಗಿ ಮಾಡಿರೆಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು