Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:19 - ಕನ್ನಡ ಸಮಕಾಲಿಕ ಅನುವಾದ

19 ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ನಾಶಮಾಡಿಬಿಟ್ಟು, ಉತ್ತಮವಾದ ಎಲ್ಲಾ ಮರಗಳನ್ನೂ ಬೀಳಮಾಡಿ, ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಉತ್ತಮವಾದ ಭೂಮಿಯಲ್ಲಿರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ಕೆಡಿಸುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಳ್ಳುವಿರಿ. ಎಲ್ಲ ಹಣ್ಣಿನ ಮರಗಳನ್ನು ಕಡಿದುಹಾಕಿ, ಬಾವಿಗಳನ್ನು ಮುಚ್ಚಿಬಿಟ್ಟು, ಹೊಲಗಳನ್ನು ಕಲ್ಲು ತುಂಬಿಸಿ ಹಾಳುಮಾಡುವಿರಿ,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು ಎಲ್ಲಾ ಹಣ್ಣಿನ ಮರಗಳನ್ನು ಕಡಿದುಹಾಕಿ ಬಾವಿಗಳನ್ನು ಮುಚ್ಚಿಬಿಟ್ಟು ಹೊಲಗಳನ್ನು ಕಲ್ಲು ತುಂಬಿಸಿ ಹಾಳು ಮಾಡುವಿರಿ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪ್ರತಿಯೊಂದು ಬಲಾಢ್ಯವಾದ ನಗರವನ್ನು ಮತ್ತು ಉತ್ತಮ ನಗರವನ್ನು ನೀವು ಮುತ್ತಿಗೆ ಹಾಕುವಿರಿ. ಪ್ರತಿಯೊಂದು ಒಳ್ಳೆಯ ಮರವನ್ನೂ ನೀವು ಕಡಿದು ಉರುಳಿಸುತ್ತೀರಿ. ಎಲ್ಲಾ ನೀರಿನ ಬುಗ್ಗೆಗಳನ್ನೂ ನೀವು ನಿಲ್ಲಿಸುವಿರಿ. ನೀವು ಕಲ್ಲುಗಳನ್ನೆಸೆದು ಪ್ರತಿಯೊಂದು ಒಳ್ಳೆಯ ತೋಟವನ್ನು ನಾಶಗೊಳಿಸುತ್ತೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:19
8 ತಿಳಿವುಗಳ ಹೋಲಿಕೆ  

“ಪೂರ್ವದಲ್ಲಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಎಲೀಷನು, “ಎಸೆ,” ಅನ್ನಲು, ಅವನು ಎಸೆದನು. “ಯೆಹೋವ ದೇವರ ವಿಜಯದ ಬಾಣವೇ, ಅರಾಮಿನಿಂದ ತಪ್ಪಿಸುವ ವಿಜಯದ ಬಾಣವೇ, ಅಫೇಕಿನಲ್ಲಿ ಅರಾಮ್ಯರನ್ನು ನಾಶಮಾಡುವವರೆಗೂ ನೀನು ಅವರನ್ನು ಹೊಡೆಯುವೆ,” ಎಂದು ಎಲೀಷನು ಹೇಳಿದನು.


ಇದಲ್ಲದೆ ಅವರು ಪಟ್ಟಣಗಳನ್ನು ಕೆಡವಿಹಾಕಿ, ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ, ಬಾವಿಗಳನ್ನೆಲ್ಲಾ ಮುಚ್ಚಿ, ಸಮಸ್ತ ಉತ್ತಮವಾದ ಮರಗಳನ್ನು ಕಡಿದುಹಾಕಿದರು. ಕೀರ್ ಹರೆಷೆತ್ ನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನು ಸುತ್ತಿಕೊಂಡು ಹೊಡೆದುಬಿಟ್ಟರು.


ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ಆದರೆ ಯೆಹೋವ ದೇವರು ಅವನಿಗೆ, “ನಾನು ನಿನ್ನ ಸಂಗಡ ಖಂಡಿತವಾಗಿ ಇರುವುದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ,” ಎಂದರು.


“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


ದೇವರು ಆಕೆಯ ಕಣ್ಣುಗಳನ್ನು ತೆರೆಯಲು, ಆಕೆಯು ನೀರಿನ ಬಾವಿಯನ್ನು ನೋಡಿದಳು. ಅಲ್ಲಿಗೆ ಹೋಗಿ ತಿತ್ತಿಯಲ್ಲಿ ನೀರನ್ನು ತುಂಬಿಸಿ, ಹುಡುಗನಿಗೆ ಕುಡಿಯಲು ಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು