Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:27 - ಕನ್ನಡ ಸಮಕಾಲಿಕ ಅನುವಾದ

27 ಆಗ ಮೋವಾಬಿನ ಅರಸನು ತನಗೆ ಬದಲಾಗಿ ಆಳುವುದಕ್ಕಿರುವ ತನ್ನ ಹಿರಿಯ ಮಗನನ್ನು ತೆಗೆದುಕೊಂಡು, ಅವನನ್ನು ಗೋಡೆಯ ಮೇಲೆ ದಹನಬಲಿಯಾಗಿ ಅರ್ಪಿಸಿದನು. ಮೋವಾಬ್ಯರು ಇಸ್ರಾಯೇಲರಿಗೆ ವಿರೋಧವಾಗಿ ರೋಷವುಳ್ಳವರಾಗಿ ಅವರನ್ನು ಬಿಟ್ಟು, ತಮ್ಮ ದೇಶಕ್ಕೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲ ಮಗನನ್ನು ಹಿಡಿದು, ವಧಿಸಿ, ಗೋಡೆಯ ಮೇಲೆ ದಹನಬಲಿ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಯೇಲರ ಮೇಲೆ ಕೋಪೋದ್ರೇಕವುಂಟಾಯಿತು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲ್ಯರ ಮೇಲೆ ಕೋಪೋದ್ರೇಕವುಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಈ ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:27
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ?


ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.


ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.


ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ.


“ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?


ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು.


ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು, ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.


ಆಗ ದೇವರು, “ನೀನು ಪ್ರೀತಿ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆಗ ಇಸ್ರಾಯೇಲಿನ ಅರಸನು ಬೇಸರದಿಂದಲೂ, ಕೋಪದಿಂದಲೂ ತನ್ನ ಅರಮನೆಗೆ ಹೋಗಲು ಹೊರಟು ಸಮಾರ್ಯಕ್ಕೆ ಬಂದನು.


ಮೋವಾಬಿನ ಅರಸನು ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಕಂಡಾಗ, ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ, ಖಡ್ಗ ಹಿಡಿಯುವ ಏಳು ನೂರು ಮಂದಿಯನ್ನು ತನ್ನ ಸಂಗಡ ತೆಗೆದುಕೊಂಡನು. ಆದರೆ ಅದು ಅವರಿಂದ ಆಗದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು