Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:4 - ಕನ್ನಡ ಸಮಕಾಲಿಕ ಅನುವಾದ

4 ಮೋವಾಬಿನ ಅರಸನಾದ ಮೇಷನು ಕುರಿ ಮಂದೆಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ, ಒಂದು ಲಕ್ಷ ಟಗರುಗಳ ಉಣ್ಣೆಯನ್ನೂ ಕಪ್ಪವಾಗಿ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅನೇಕ ಕುರಿಹಿಂಡುಗಳುಳ್ಳವನಾಗಿದ್ದ ಮೋವಾಬ್ಯರ ಅರಸ ಮೇಷನೆಂಬವನು ಇಸ್ರಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅನೇಕ ಕುರಿಹಿಂಡುಗಳುಳ್ಳವನಾಗಿದ್ದ ಮೋವಾಬ್ಯರ ಅರಸನಾದ ಮೇಷನೆಂಬವನು ಇಸ್ರಾಯೇಲ್ಯರ ಅರಸನಿಗೆ ಲಕ್ಷ ಕುರಿಗಳ ಮತ್ತು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೇಷನು ಮೋವಾಬಿನ ರಾಜನಾಗಿದ್ದನು. ಮೇಷನು ಅನೇಕ ಕುರಿಗಳ ಒಡೆಯನಾಗಿದ್ದನು. ಮೇಷನು ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಇಸ್ರೇಲಿನ ರಾಜನಿಗೆ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:4
11 ತಿಳಿವುಗಳ ಹೋಲಿಕೆ  

ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”


ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.


ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.


ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.


ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ಅಬ್ರಾಮನು ಪಶುಗಳು, ಬೆಳ್ಳಿ ಮತ್ತು ಬಂಗಾರವನ್ನು ಹೊಂದಿ ಬಹು ಧನವಂತನಾಗಿದ್ದನು.


ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು