Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:6 - ಕನ್ನಡ ಸಮಕಾಲಿಕ ಅನುವಾದ

6 ಆ ದಿವಸದಲ್ಲಿ ಅರಸನಾದ ಯೋರಾಮನು ಸಮಾರ್ಯದಿಂದ ಹೊರಟುಹೋಗಿ ಇಸ್ರಾಯೇಲರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ಅರಸನಾದ ಯೋರಾಮನು ಒಡನೆ ಇಸ್ರಯೇಲರನ್ನು ಕೂಡಿಸಿಕೊಂಡು ಸಮಾರಿಯದಿಂದ ಹೊರಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದದರಿಂದ ಅರಸನಾದ ಯೋರಾಮನು ಒಡನೆ ಇಸ್ರಾಯೇಲ್ಯರನ್ನು ಕೂಡಿಸಿಕೊಂಡು ಸಮಾರ್ಯದಿಂದ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ರಾಜನಾದ ಯೋರಾಮನು ಸಮಾರ್ಯದಿಂದ ಹೊರಗೆ ಹೋಗಿ, ಇಸ್ರೇಲಿನ ಜನರನ್ನೆಲ್ಲ ಒಟ್ಟುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:6
6 ತಿಳಿವುಗಳ ಹೋಲಿಕೆ  

ಆದ್ದರಿಂದ ಇಸ್ರಾಯೇಲರು ಲೆಕ್ಕ ಮಾಡಿ ಆಹಾರವನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲರು ಅವರಿಗೆದುರಾಗಿ ದಂಡಿಳಿದಿರುವಾಗ, ಅವರು ಆಡುಮರಿಗಳ ಎರಡು ಮಂದೆಗಳ ಹಾಗಿದ್ದರು. ಆದರೆ ಅರಾಮ್ಯರು ಮೈದಾನದಲ್ಲಿ ಸಂಪೂರ್ಣವಾಗಿ ಆವರಿಸಿದ್ದರು.


ಆಗ ಸೌಲನು ತೆಲಾಯಿಮಿನಲ್ಲಿ ಜನರನ್ನು ಕೂಡಿಸಿ, ಲೆಕ್ಕ ಮಾಡಿದನು. ಇಸ್ರಾಯೇಲರ ಕಾಲಾಳುಗಳು ಎರಡು ಲಕ್ಷ ಜನರೂ, ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.


ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು.


ಅಹಾಬನು ಮರಣ ಹೊಂದಿದ ತರುವಾಯ, ಮೋವಾಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಇದಲ್ಲದೆ ಅವನು ಹೋಗಿ, “ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?” ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು. ಅದಕ್ಕವನು, “ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು