Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:7 - ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅವನು ಹೋಗಿ, “ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?” ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು. ಅದಕ್ಕವನು, “ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರ, “ಮೋವಾಬ್ಯರ ಅರಸನು ನನಗೆ ವಿರುದ್ಧ ದಂಗೆ ಎದ್ದಿದ್ದಾನೆ; ಮೋವಾಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ - ಮೋವಾಬ್ಯರ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ; ಮೋವಾಬ್ಯರೊಡನೆ ಯುದ್ಧಮಾಡುವದಕ್ಕೆ ನೀನು ನನ್ನ ಜೊತೆಯಲ್ಲಿ ಬರುತ್ತೀಯೋ ಎಂದು ಹೇಳಿಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು - ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋರಾಮನು ಯೆಹೂದದ ರಾಜನಾದ ಯೆಹೋಷಾಫಾಟನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಆಳ್ವಿಕೆಯಿಂದ ಮೋವಾಬಿನ ರಾಜನು ಬೇರ್ಪಟ್ಟಿದ್ದಾನೆ. ಮೋವಾಬಿನ ವಿರುದ್ಧ ಹೋರಾಡಲು ನನ್ನ ಜೊತೆ ಬರುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಿನ್ನ ಜೊತೆ ನಾನೂ ಬರುತ್ತೇನೆ. ನಾನೂ ನೀನೂ ಒಂದೇ. ನನ್ನ ಜನರೂ ನಿನ್ನ ಜನರೂ ಒಂದೇ. ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:7
12 ತಿಳಿವುಗಳ ಹೋಲಿಕೆ  

ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು.


ಇಸ್ರಾಯೇಲಿನ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಅದಕ್ಕವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಾವು ಯುದ್ಧದಲ್ಲಿ ನಿನ್ನ ಸಂಗಡ ಇರುವೆವು,” ಎಂದನು.


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಆ ದಿವಸದಲ್ಲಿ ಅರಸನಾದ ಯೋರಾಮನು ಸಮಾರ್ಯದಿಂದ ಹೊರಟುಹೋಗಿ ಇಸ್ರಾಯೇಲರನ್ನು ಕೂಡಿಸಿದನು.


ಯೋರಾಮನು, “ಯಾವ ಮಾರ್ಗವಾಗಿ ಹೋಗೋಣ?” ಎಂದು ಇವನು ಕೇಳಿದನು. ಯೆಹೋಷಾಫಾಟನು, “ಎದೋಮಿನ ಮರುಭೂಮಿಯ ಮಾರ್ಗವಾಗಿ,” ಎಂದನು.


ಹೀಗೆ ಇಸ್ರಾಯೇಲಿನ ಅರಸನು ಮತ್ತು ಯೆಹೂದದ ಅರಸನು, ಎದೋಮಿನ ಅರಸನೊಂದಿಗೆ ಹೊರಟು, ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ, ಅವರು ತಂದಿದ್ದ ಪಶುಗಳಿಗೂ ನೀರು ಇಲ್ಲದೆ ಹೋಯಿತು.


ಅನಂತರ ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ವರ್ಷದ ಆರಂಭದಲ್ಲಿ ಮೋವಾಬ್ಯರ ದಂಡುಗಳು ದೇಶದಲ್ಲಿ ಪ್ರವೇಶಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು