Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:9 - ಕನ್ನಡ ಸಮಕಾಲಿಕ ಅನುವಾದ

9 ಹೀಗೆ ಇಸ್ರಾಯೇಲಿನ ಅರಸನು ಮತ್ತು ಯೆಹೂದದ ಅರಸನು, ಎದೋಮಿನ ಅರಸನೊಂದಿಗೆ ಹೊರಟು, ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ, ಅವರು ತಂದಿದ್ದ ಪಶುಗಳಿಗೂ ನೀರು ಇಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಇಸ್ರಯೇಲ್, ಜುದೇಯ ಹಾಗು ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದಿದ್ದ ಪಶುಗಳಿಗೂ ನೀರು ಸಿಕ್ಕದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಇಸ್ರಾಯೇಲ್ ಯೆಹೂದ ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದ ಪಶುಗಳಿಗೂ ನೀರು ಸಿಕ್ಕದೆಹೋದದರಿಂದ ಇಸ್ರಾಯೇಲ್ಯರ ಅರಸನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಇಸ್ರೇಲಿನ ರಾಜನು ಯೆಹೂದದ ಮತ್ತು ಎದೋಮಿನ ರಾಜರೊಂದಿಗೆ ಹೋದನು. ಅವರು ಏಳು ದಿನಗಳ ಕಾಲ ಪ್ರಯಾಣ ಮಾಡಿದರು. ಅವರ ಸೇನೆಗೆ ಮತ್ತು ಪ್ರಾಣಿಗಳಿಗೆ ಸಾಕಾಗುವಷ್ಟು ನೀರು ಅಲ್ಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:9
16 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಎದೋಮಿನೊಳಗೆ ಅರಸನಿರಲಿಲ್ಲ, ಅಧಿಪತಿಯು ಆಳುತ್ತಿದ್ದನು.


‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು.


ಬಾರಾಕನು ಜೆಬುಲೂನನ್ನೂ, ನಫ್ತಾಲಿಯನ್ನೂ ಕೆದೆಷಿಗೆ ಕರೆದನು. ಅವನು ಹತ್ತು ಸಾವಿರ ಜನರಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.


ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.


ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.


ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಏಕೆ ಯೆಹೋವ ದೇವರ ಸಭೆಯವರಾದ ನಮ್ಮನ್ನೂ ಈ ಮರುಭೂಮಿಗೆ ತಂದಿರಿ.


ಆಗ ಜನರಿಗೆ ನೀರು ಇಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡರು.


ಇಸ್ರಾಯೇಲ್ ಸಮೂಹವೆಲ್ಲಾ ಯೆಹೋವ ದೇವರ ಅಪ್ಪಣೆಯ ಪ್ರಕಾರ ಅವರವರು ಹೊರಡುವ ಕ್ರಮದಂತೆ ಸೀನ್ ಮರುಭೂಮಿಯಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.


ಆಮೇಲೆ ಮೋಶೆಯು ಇಸ್ರಾಯೇಲರನ್ನು ಕೆಂಪು ಸಮುದ್ರದಿಂದ ನಡೆಸಿದನು. ಅವರು ಶೂರಿನ ಮರುಭೂಮಿಯೊಳಗೆ ಹೋದರು. ಅವರು ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿದರೂ ನೀರನ್ನು ಕಂಡುಕೊಳ್ಳಲಿಲ್ಲ.


ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು, ನನಗೆ ಅಡ್ಡಬಿದ್ದು, ನನಗೆ ನೀನೂ, ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ, ‘ಹೊರಗೆ ಹೋಗಿರಿ,’ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು,” ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.


ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರ್ಷದಲ್ಲಿ, ಅಹಾಬನ ಮಗ ಯೋರಾಮನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು.


ಇದಲ್ಲದೆ ಅವನು ಹೋಗಿ, “ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?” ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು. ಅದಕ್ಕವನು, “ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ,” ಎಂದನು.


ಯೋರಾಮನು, “ಯಾವ ಮಾರ್ಗವಾಗಿ ಹೋಗೋಣ?” ಎಂದು ಇವನು ಕೇಳಿದನು. ಯೆಹೋಷಾಫಾಟನು, “ಎದೋಮಿನ ಮರುಭೂಮಿಯ ಮಾರ್ಗವಾಗಿ,” ಎಂದನು.


ಆಗ ಇಸ್ರಾಯೇಲಿನ ಅರಸನು, “ಅಯ್ಯೋ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾರಲ್ಲಾ?” ಎಂದನು.


ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.


ಯೆಹೋಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗುವುದಕ್ಕೆ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ. ಆ ಹಡಗುಗಳು ಎಚ್ಯೋನ್ ಗೆಬೆರಿನ ಬಳಿಯಲ್ಲಿ ಒಡೆದುಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು