Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:1 - ಕನ್ನಡ ಸಮಕಾಲಿಕ ಅನುವಾದ

1 ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:1
35 ತಿಳಿವುಗಳ ಹೋಲಿಕೆ  

ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.


ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.


“ಆದರೆ ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ, ತನ್ನ ಸಾಲವನ್ನು ತೀರಿಸುವವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.


ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.


ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;


ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.


“ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬರು ಹೃದಯಪೂರ್ವಕವಾಗಿ ತನ್ನ ಸಹೋದರನನ್ನು ಕ್ಷಮಿಸದೆ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ಸಹ ನಿಮಗೆ ಹಾಗೆಯೇ ಮಾಡುವರು,” ಎಂದರು.


‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.


ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.


ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.


ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.


ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.


ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು.


ಅವನ ಸಹೋದರರಲ್ಲಿ ಒಬ್ಬನು ಈಡುಕೊಟ್ಟು ಅವನನ್ನು ವಿಮೋಚಿಸಬಹುದು.


ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.


ಯೆಹೋವ ದೇವರಿಗೆ ಭಯ ಪಡುವವರಾದ ಹಿರಿಯರನ್ನೂ ಕಿರಿಯರನ್ನೂ ಬೇಧವಿಲ್ಲದೇ ಆಶೀರ್ವದಿಸುವರು.


ಆಗ ದೇವರ ಮನುಷ್ಯನು ಇಸ್ರಾಯೇಲಿನ ಅರಸನಿಗೆ, “ಅಂಥಾ ಸ್ಥಳವನ್ನು ಹಾದುಹೋಗದೆ ಜಾಗ್ರತೆಯಾಗಿ ಇರು. ಏಕೆಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆ,” ಎಂದು ಹೇಳಿ ಕಳುಹಿಸಿದನು.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತುಹೋದನು. ಆಕೆಯೂ ಆಕೆಯ ಇಬ್ಬರು ಪುತ್ರರೂ ಉಳಿದರು.


ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.


ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.


ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು