Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:13 - ಕನ್ನಡ ಸಮಕಾಲಿಕ ಅನುವಾದ

13 ಅವನು ಗೇಹಜಿಗೆ, “ಇಗೋ, ನೀನು ಕಷ್ಟಪಟ್ಟು ನಮಗೋಸ್ಕರ ಉಪಕಾರಮಾಡಿದೆ. ನಾನು ನಿನಗೆ ಮಾಡಬೇಕಾದದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ, ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡಬೇಕೋ ಎಂದು ಆಕೆಗೆ ಕೇಳು,” ಎಂದನು. ಅದಕ್ಕವಳು, “ನಾನು ನನ್ನ ಜನರ ಮಧ್ಯದಲ್ಲಿ ಸುಖವಾಗಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಎಲೀಷನು ಗೇಹಜಿಯ ಮುಖಾಂತರ ಆಕೆಯನ್ನು, “ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದೆ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನ್ನ ಪರವಾಗಿ ಅರಸನ ಮುಂದಾಗಲಿ, ಸೇನಾಪತಿಯ ಮುಂದಾಗಲಿ ಮಾತಾಡಬೇಕಾದರೆ ಹೇಳು,” ಎಂದು ಕೇಳಿದನು. ಆಕೆ, “ನಾನು ಸ್ವಕುಲದವರ ಮಧ್ಯೆ ಸುಖವಾಗಿದ್ದೇನೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಎಲೀಷನು ಗೇಹಜಿಯ ಮುಖಾಂತರವಾಗಿ ಆಕೆಯನ್ನು - ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದಿ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರವಾಗಿ ಅರಸನ ಮುಂದಾಗಲಿ ಸೇನಾಪತಿಯ ಮುಂದಾಗಲಿ ಮಾತಾಡಬೇಕೋ ಎಂದು ಕೇಳಲು ಆಕೆಯು - ನಾನು ಸ್ವಕುಲದವರ ಮಧ್ಯದಲ್ಲಿ ಸುಖವಾಗಿದ್ದೇನೆ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲೀಷನು ಗೇಹಜಿಗೆ (ಸೇವಕನಿಗೆ), “ನೀನು ಆ ಸ್ತ್ರೀಯ ಬಳಿಗೆ ಹೋಗಿ, ‘ನೋಡು, ನೀನು ನಮ್ಮನ್ನು ಉಪಚರಿಸುವುದಕ್ಕಾಗಿ ನಿನ್ನಿಂದ ಸಾಧ್ಯವಾದಷ್ಟು ಮಾಡಿರುವೆ. ನಮ್ಮಿಂದ ನಿನಗೇನಾದರೂ ಉಪಕಾರವಾಗಬೇಕೇ? ನಿನ್ನ ಬಗ್ಗೆ ರಾಜನ ಬಳಿಯಲ್ಲಾದರೂ ಅಥವಾ ಸೈನ್ಯಾಧಿಕಾರಿಯ ಬಳಿಯಲ್ಲಾದರೂ ನಾವು ಮಾತನಾಡಬೇಕೇ?’ ಎಂದು ಕೇಳು” ಎಂಬುದಾಗಿ ಹೇಳಿದನು. ಆ ಸ್ತ್ರೀಯು, “ಇಲ್ಲಿ ನಾನು ನನ್ನ ಜನರೊಡನೆ ಸುಖವಾಗಿ ಜೀವಿಸುತ್ತಿದ್ದೇನೆ” ಎಂದು ಉತ್ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:13
22 ತಿಳಿವುಗಳ ಹೋಲಿಕೆ  

ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆಗಳು.


ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.


ಅವನು ಅಲ್ಲಿ ಸೇರಿದಾಗ, ಅಲ್ಲಿ ಯೇಹುವು ಮತ್ತು ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು, “ಅಧಿಪತಿಯೇ, ನಿನಗೊಂದು ಮಾತು ಹೇಳುವುದಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಅಧಿಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ನೀನು, ನಿನ್ನ ಮನೆಯವರು ಎದ್ದು ಎಲ್ಲಿ ಇಳಿದುಕೊಳ್ಳುವ ಸ್ಥಳ ಉಂಟೋ ಅಲ್ಲಿ ಹೋಗಿ ವಾಸಿಸಿರಿ. ಏಕೆಂದರೆ ಯೆಹೋವ ದೇವರು ಬರವನ್ನು ಕಳುಹಿಸಲಿದ್ದಾರೆ. ಅದು ದೇಶದ ಮೇಲೆ ಏಳು ವರ್ಷದವರೆಗೂ ಬರುವುದು,” ಎಂದು ಹೇಳಿದನು.


ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.


ನನ್ನ ಆಳುಗಳು ಊಟಮಾಡಿದ್ದು ಸಾಕು. ನನ್ನ ಸಂಗಡ ಬಂದ ಆನೇರ, ಎಷ್ಕೋಲ್ ಮತ್ತು ಮಮ್ರೆ ಎಂಬ ಈ ಜನರ ಪಾಲನ್ನು ಬಿಟ್ಟು ನಾನು ಏನನ್ನೂ ತೆಗೆದುಕೊಳ್ಳುವುದಿಲ್ಲ. ಇವರು ತಮ್ಮ ಪಾಲನ್ನು ತೆಗೆದುಕೊಳ್ಳಲಿ,” ಎಂದನು.


ಆಗ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೀನು ಶೂನೇಮ್ಯಳನ್ನು ಕರೆ,” ಎಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಎಲೀಷನ ಮುಂದೆ ಬಂದು ನಿಂತಳು.


ಎಲೀಷನು ಗೇಹಜಿಗೆ, “ಅವಳಿಗೋಸ್ಕರ ಮಾಡಬೇಕಾದದ್ದೇನು?” ಎಂದನು. ಅದಕ್ಕೆ ಗೇಹಜಿಯು, “ಅವಳಿಗೆ ಮಕ್ಕಳಿಲ್ಲ. ಅವಳ ಗಂಡನು ವೃದ್ಧನಾಗಿದ್ದಾನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು